ಕಡಬ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕನಿಗೆ ಗಾಯ

(ನ್ಯೂಸ್ ಕಡಬ) Newskadaba.com ಕಡಬ, ಅ. 29. ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ವೇಳೆ ಕಂಬ ಮುರಿದು ಬಿದ್ದ ಪರಿಣಾಮ ಕಾರ್ಮಿಕರೋರ್ವರು ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡವರನ್ನು ರಾಜು ಎಂದು ಗುರುತಿಸಲಾಗಿದೆ. ಇವರು ವಿದ್ಯುತ್ ಕಂಬದಲ್ಲಿ ನಿಂತು ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಕಂಬ ತುಂಡಾಗಿ ಬಿದ್ದು, ಸಣ್ಣ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Scroll to Top