Big Breaking: ಚಿತ್ರನಟ ಪುನೀತ್ ರಾಜ್‍ಕುಮಾರ್ ವಿಧಿವಶ ➤ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29. ಹೃದಯಾಘಾತಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೃತಪಟ್ಟಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಇಂದು ಪುನೀತ ರಾಜ್‍ಕುಮಾರ್ ಗೆ ಹೃದಯಾಘಾತವಾಗಿದ್ದು, ತಕ್ಷಣವೇ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಕೈಚೆಲ್ಲಿದ್ದರು. ಈ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಖ್ಯಾತ ಚಿತ್ರನಟರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಪುನೀತ್ ಅಭಿಮಾನಿಗಳು ಆಸ್ಪತ್ರೆಯ ಹೊರಭಾಗದಲ್ಲಿ ತಮ್ಮ ನೆಚ್ಚಿನ ನಟನಿಗೆ ಬೇಕಾಗಿ ಪ್ರಾರ್ಥಿಸುತ್ತಿದ್ದ ದೃಶ್ಯ ಕಂಡುಬಂತು.

Also Read  ಜೂ. 30ರೊಳಗೆ ಆಸ್ತಿ ವಿವರ ಸಲ್ಲಿಸುವಂತೆ 224 ಶಾಸಕರಿಗೆ ಲೋಕಾಯುಕ್ತ ಖಡಕ್ ಸೂಚನೆ

 

 

 

error: Content is protected !!
Scroll to Top