ಮಂಗಳೂರು: ಪಾದಚಾರಿಗೆ ಜೀಪು ಢಿಕ್ಕಿ ➤ ನೆಲ್ಯಾಡಿಯ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 30. ಜೀಪು ಢಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ.

ಮೃತರನ್ನು ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರದಂದು ರಾತ್ರಿ ವೇಳೆ ಬೈಕಂಪಾಡಿ ಸಮೀಪ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪು ಡಿಕ್ಕಿ ಹೊಡೆದು, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top