ಮಂಗಳೂರು: ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ..!

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಇಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ.


ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಸರಿಪಡಿಸಿದ್ದಾರೆ.

Scroll to Top