ನ್ಯಾಯಾಧೀಶನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಬಾಲಕನ ಮೇಲೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೋರ್ವರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ.

ರಾಜಸ್ಥಾನದ ಜಿಲ್ಲಾ ನ್ಯಾಯಾಧೀಶ ಜಿತೇಂದ್ರ ಸಿಂಗ್ 14 ವರ್ಷದ ಬಾಲಕನೋರ್ವನನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಆರೋಪಿ ಜಿತೇಂದ್ರ ಸಿಂಗ್ ವಿರುದ್ದ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಬೆನ್ನಲ್ಲೇ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ತೆಗೆದು ಹಾಕಲಾಗಿದೆ.

Scroll to Top