(ನ್ಯೂಸ್ ಕಡಬ) newskadaba.com ಚೆನ್ನೈ, ನ. 04. ಆಂಬ್ಯುಲೆನ್ಸ್ ವೊಂದರಲ್ಲಿ 200 ಕೆಜಿ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ತಂಜಾವೂರು ಮೂಲಕ ಶ್ರೀಲಂಕಾಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ ಸುಳಿವು ಮೂಲಕ ನೀಡಿದ ಮಾಹಿತಿಯಂತೆ ಪೊಲೀಸರು ಶೋಧಕಾರ್ಯ ಆರಂಭಿಸಿ, ಆಂಬ್ಯುಲೆನ್ಸ್ ಅನ್ನು ತಡೆ ಹಿಡಿದಿದ್ದರು. ಈ ಸಂದರ್ಭ ಅದರ ಚಾಲಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದು, ಪೊಲೀಸರು ವಾಹನವನ್ನು ತಪಾಸಣೆ ನಡೆಸಿದಾಗ ಹಲವು ಚೀಲಗಳಲ್ಲಿ 200 ಕಿಲೋ ಗಾಂಜಾ ಪತ್ತೆಯಾಗಿದೆ. ವಿಚಾರಣೆ ವೇಳೆ ಶ್ರೀಲಂಕಾಕ್ಕೆ ಗಾಂಜಾ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.