ಪದ್ಮಶ್ರೀ ಪುರಸ್ಕೃತ ಹಾಜಬ್ಬರನ್ನು ಶ್ಲಾಘಿಸಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 10. ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಸೋಮವಾರದಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ ಅವರನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಶ್ಲಾಘಿಸಿದ್ದಾರೆ.

ನಟಿ ಅನುಷ್ಕಾ ಅವರು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಹಾಜಬ್ಬರನ್ನು ಪ್ರಶಂಸಿಸಿ, ಸಮಾಜಕ್ಕೆ ಹಾಜಬ್ಬ ಅವರ ಕೊಡುಗೆಯನ್ನು ಗುರುತಿಸಿದ್ದಾರೆ. ಹರೇಕಳ ಹಾಜಬ್ಬರು ಕಿತ್ತಳೆ ಹಣ್ಣು ಮಾರಾಟ ಮಾಡಿ ಬಂದ ಹಣದಿಂದ ತಮ್ನ ಗ್ರಾಮದಲ್ಲಿ ಶಾಲೆಯೊಂದನ್ನು ನಿರ್ಮಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿ ಶಿಕ್ಷಣ ಕ್ರಾಂತಿ ತಂದಿದ್ದಕ್ಕೆ ಈ ಪ್ರಶಸ್ತಿ ಪಡೆದಿದ್ದಾರೆ.

Scroll to Top