(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಹಾಗೂ ಇತರ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಏರ್ಪೋರ್ಟ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ವಿಮಾನ ನಿಲ್ದಾಣದ ಸುತ್ತಲೂ ಬೋನ್ ಇರಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ರನ್ ವೇ ಸುತ್ತಮುತ್ತ ಚಿರತೆಗಳು ಕಂಡುಬಂದಿದ್ದು, ಅಲ್ಲದೇ ನವಲಿ, ನರಿ ಹಾಗೂ ಹಕ್ಕಿಗಳ ಕಾಟವೂ ಹೆಚ್ಚಾಗಿದ್ದು, ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯು ಕಾರ್ಯಾಚರಣೆ ಕೈಗೊಂಡಿದೆ.