ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ



(ನ್ಯೂಸ್ ಕಡಬ) newskadaba.com ಕಡಬ, ನ.17. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.







ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

error: Content is protected !!
Scroll to Top