ಬಿಜೆಪಿ ಮುಖಂಡ, ಮಾಜಿ ಕಾರ್ಪೊರೇಟರ್ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಒರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಅತ್ತಿಗುಪ್ಪೆ ಸಮಿಫದ ಬಿಸಿಸಿ ಲೇಔಟ್ ನಿವಾಸಿ ಎಂ.ಬಿ. ಶಿವಪ್ಪ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರ ಅವರ ಪುತ್ರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಪ್ಪ ಅವರು ಹಲವು ದಿನಗಳಿಂದ ಮಧುಮೇಹ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಈ ಕುರಿತು ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

error: Content is protected !!
Scroll to Top