ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 22. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಬಂಧಿತ ಆರೋಪಿಗಳನ್ನು ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆ ಹೋದ ಸಂದರ್ಭ ಆರೋಪಿಗಳು ಬಾಲಕಿಯ ಮನೆಗೆ ಬಂದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಅಪ್ಪ, ಅಮ್ಮನನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಬಾಲಕಿಗೆ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ಪೋಷಕರು ಮಹಿಳಾ ಠಾಣೆಗೆ ದೂರು ನೀಡಿದ್ದು, ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

Also Read  Windows 11 Professional - the Way to Obtain, Install And Activate?

 

error: Content is protected !!
Scroll to Top