(ನ್ಯೂಸ್ ಕಡಬ) newskadaba.com ಮಂಗಳೂರು, ನ.03. ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.
ಮೃತ ಯುವಕನನ್ನು ಮೂಡಬಿದಿರೆಯ ಗಂಟಾಲ್ಕಟ್ಟೆ ನಿವಾಸಿ ರಿಯಾಝ್ ಅಹಮ್ಮದ್(25 ) ಎಂದು ಗುರುತಿಸಲಾಗಿದೆ.
ದುಬೈನ ಅಜ್ಮನ್ ನಲ್ಲಿ ಉದ್ಯೋಗದಲ್ಲಿದ್ದ ರಿಯಾಝ್ ಅಹಮದ್ ತನ್ನ ಮನೆ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ದುಬೈಗೆ ತೆರಳಿದ್ದನೆನ್ನಲಾಗಿದ್ದು, ಮೃತದೇಹವನ್ನು ಊರಿಗೆ ತರುವ ಪ್ರಯತ್ನ ನಡೆಯುತ್ತಿದೆ.