ರೂಪಾಂತರಿ ತಳಿ ಒಮಿಕ್ರಾನ್ ಆತಂಕ- ಶಾಲಾ ಕಾಲೇಜು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ ➤ ಸಚಿವ ಬಿ.ಸಿ.ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ಹೊಸ ರೂಪಾಂತರಿ ತಳಿ ಒಮಿಕ್ರಾನ್ ಕಾರಣದಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಪೋಷಕರು ಹಿಂಜರಿಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ರಾಜ್ಯದಲ್ಲಿ ಶಾಲಾ ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಪೋಷಕರು ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ.


ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳನ್ನು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕೊರೊನಾ ಹಿನ್ನೆಲೆಯಿಂದಾಗಿ ಸದಾ ಸಂಪರ್ಕದಲ್ಲಿದೆ. ಕೊರೋನಾ ಹೆಚ್ಚಾದರೆ ಸರ್ಕಾರದ ಸಲಹೆಯಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Also Read  ದ.ಕ, ಉಡುಪಿ ಜಿಲ್ಲೆಯ ವಿವಿಧ ಪಶು ವೈದ್ಯಾಧಿಕಾರಿಗಳ ವರ್ಗಾವಣೆ

error: Content is protected !!
Scroll to Top