ವಿಧಾನಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿ ಪೆರಾಜೆಗೆ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ವಿಧಾನಪರಿಷತ್ ಚುನಾವಣೆಯ ಅಂಗವಾಗಿ ಕೊಡಗು ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರ ಪರವಾಗಿ ಮಂಗಳವಾರದಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಭೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ರಾಬಿನ್ ದೇವಯ್ಯ, ಬಿಜೆಪಿ ತಾಲೂಕ್ ಅಧ್ಯಕ್ಷರಾದ ಕಾಂಗಿರ ಸತೀಶ್, ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ರಾಜ್ಯ ಉಸ್ತುವಾರಿ ಮನು ಮುತ್ತಪ್ಪ, ಬಿಜೆಪಿ ವಕ್ತಾರರಾದ ಸುಬ್ರಮಣ್ಯ ಉಪಾದ್ಯಾಯ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

Also Read  ಬೆಂಗಳೂರು ಬಂದ್‌ʼಗೆ ಅವಕಾಶವಿಲ್ಲ; ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿ- ಕಮಿಷನರ್ ಬಿ. ದಯಾನಂದ್

error: Content is protected !!
Scroll to Top