ಮೂರು ಕೃಷಿ ಕಾನೂನು ರದ್ದತಿ ಮಸೂದೆಗೆ ಸಹಿ ಹಾಕಿದ ರಾಷ್ಟ್ರಪತಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ದೇಶದಾದ್ಯಂತ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರದಂದು ಸಹಿ ಹಾಕಿದ್ದಾರೆ.


ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಪ್ರತಿಪಕ್ಷಗಳ ಚರ್ಚೆಯ ನಡುವೆ ಲೋಕಸಭೆಯಲ್ಲಿ ಕೇವಲ 4 ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ರಾಜ್ಯಸಭೆಯಲ್ಲೂ ಅಲ್ಪ ಕಾಲದ ಚರ್ಚೆಯ ನಂತರ ಮಸೂದೆ ಅಂಗೀಕಾರವಾಗಿತ್ತು.

Also Read  ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

error: Content is protected !!
Scroll to Top