(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.04. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಬುಡೋಳಿ ಸಮೀಪದ ಬೊಳ್ಳುಕಲ್ಲು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ರಿಕ್ಷಾದ ಮುಂಭಾಗದ ಚಕ್ರ ಕಳಚಿ ಬಿದ್ದ ಪರಿಣಾಮ ರಿಕ್ಷಾ ಪಲ್ಟಿಯಾಗಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.