(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಸುವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ.
ರಾಜ್ಯ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಟಿದೆಯಾದರೂ, ಈ ಬಗ್ಗೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ವಿಧ್ಯಾರ್ಥಿಗಳು ಅಥವಾ ಜನಸಾಮಾನ್ಯರಿಗೆ ಯಾವುದೇ ಅರಿವು ಇಲ್ಲದಾಗಿದ್ದು, ಇದು ಶಿಕ್ಷಣ ವ್ಯವಸ್ಥೆಯನ್ನೇ ಹಿಂದಕ್ಕೆ ತಳ್ಳುವ ನೀತಿಯಾಗಿದೆ ಎಂದರು. ದೇಶದ ಶೇ. 30ರಷ್ಟಿರುವ ವಿದ್ಯಾರ್ಥಿ ಸಮುದಾಯವನ್ನು ಗುರಿಯಾಗಿಸಿಕೊಂಡು ಅವರ ಭವಿಷ್ಯಕ್ಕೆ ತೊಂದರೆ ನೀಡುವ ಕುತಂತ್ರ ಎಂದು ಅವರು ಹೇಳಿದರು. ಇದು ಯಾವುದೇ ರೀತಿಯ ರಾಜಕೀಯ ಪ್ರೇರಿತ ವಿರೋಧವಲ್ಲ. ಈ ನೀತಿಯನ್ನು ತಜ್ಞರ ಸಲಹೆ ಪಡೆದು ಚರ್ಚಿಸಿ, ತಪ್ಪುಗಳನ್ನು ಸರಿಪಡಿಸಿ ಜಾರಿಗೊಳಿಸಬೇಕು ಎಂಬುದು ನಮ್ಮ ಆಗ್ರಹ ಎಂದರು.