ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ➤ ಎಸ್ಡಿಪಿಐ ಹಾಗೂ ಸಿಎಫ್ಐ ಮುಖಂಡರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03. ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ನೀಡಿರುವ ದೂರಿನನ್ವಯ ಎಸ್ಡಿಪಿಐ ಹಾಗೂ ಸಿಎಫ್ಐ ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೋಮು ಭಾವನೆಯನ್ನು ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆಗೆ ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೇ, ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ ಒಳಗಡೆ ಅಕ್ರಮ ಪ್ರವೇಶ ಮಾಡಿ ಅಲ್ಲಿನ ವಿದ್ಯಾರ್ಥಿಗಳ ನಡುವೆ ಗಲಭೆ ನಡೆಸಲು ಹುನ್ನಾರ ನಡೆಸಿರುತ್ತಾರೆ ಎಂದು ಆರೋಪಿಸಿ ಪುಷ್ಪರಾಜ್ ಆಚಾರ್ಯ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

 

 

Scroll to Top