ಒಮಿಕ್ರಾನ್ ಆತಂಕ- ಶಾಲಾ ಕಾಲೇಜುಗಳಲ್ಲಿ ಸಭೆ ಸಮಾರಂಭ ರದ್ದು ➤ ಮದುವೆಗೆ 500 ಮಂದಿಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂದು ಸಿಎಂ ನೇತೃತ್ವದಲ್ಲಿ ನಡೆದ ಒಮಿಕ್ರಾನ್ ವೈರಸ್ ತಡೆ ಸಂಬಂಧಿಸಿ ನಡೆದ ಮಹತ್ವದ ಸಭೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಸಭೆಯ ಬಳಿಕ ಮಾತನಾಡಿದ ಅಶೋಕ್, ಇನ್ಮುಂದೆ ಶಾಲಾ ಕಾಲೇಜುಗಳಲ್ಲಿ ಎಲ್ಲಾ ಸಭೆ ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಮಕ್ಕಳ ಪೋಷಕರು ಕೋವಿಡ್ ಲಸಿಕೆ ಪಡೆದಿರಬೇಕು. ರಾಜ್ಯಾದ್ಯಂತ ಕಂಟ್ರೋಲ್ ರೂಂ ಪುನರಾರಂಭಗೊಳ್ಳುತ್ತದೆ. ಮದುವೆಗಳಲ್ಲಿ 500 ಮಂದಿಗೆ ಮಾತ್ರ ಅವಕಾಶ. ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ, ಐಸಿಯು ಪುನರ್ ಸಿದ್ದತೆಗೊಳಿಸುವಂತೆ ಸೂಚನೆ ನೀಡಲಾಗಿದೆ.

 

 

Scroll to Top