ತೊಕ್ಕೊಟ್ಟು: ಲಾರಿ – ಆಕ್ಟಿವಾ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ.05. ಲಾರಿಯೊಂದು ಹೋಂಡಾ ಆಕ್ಟಿವಾಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ರಾತ್ರಿ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ.

ಮೃತ ಸವಾರನನ್ನು ಪಡೀಲ್ ನಿವಾಸಿ ರಾಜೇಶ್ ವೇಗಸ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿತುವ ಸಹ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ರಸ್ತೆ ಅವ್ಯವಸ್ಥೆಯ ಬಗ್ಗೆ ಕೆಲಕಾಲ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಸ್ಥಳಕ್ಕೆ ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಿ ಕಳುಹಿಸಿದರು.

Scroll to Top