ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 10. ಆಕಾಶದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ವರದಿಯಾಗಿದೆ.

ಇದರ ಪ್ರಕಾರ, ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ತೆರಳುತ್ತಿದ್ದ ವೇಳೆ ದಟ್ಟ ಮಂಜಿನ ಕಾರಣದಿಂದಾಗಿ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಮೂರು ಸುತ್ತು ಹಾಕಿದೆ ಎಂದು ತಿಳಿದುಬಂದಿದೆ. ಲ್ಯಾಂಡಿಂಗ್ ಕ್ಲಿಯರೆನ್ಸ್ ಇಲ್ಲದ ಕಾರಣ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ, ಅರ್ಧಗಂಟೆಯ ಬಳಿಕ ಇಂಡಿಗೋ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ.

Scroll to Top