ಸುಬ್ರಹ್ಮಣ್ಯ: ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 10. ಸುಮಾರು ಐದು ವರ್ಷಗಳ ಹಿಂದೆ ‘ಒಂದಿಷ್ಟು ಸಮಾಜಕ್ಕಾಗಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭವಾದ ಯುವ ತೇಜಸ್ಸು ಟ್ರಸ್ಟ್ ಸುಬ್ರಹ್ಮಣ್ಯ ವತಿಯಿಂದ ಆಂಬ್ಯುಲೆನ್ಸ್ ಸೇವೆ ನೀಡುವ ಉದ್ದೇಶದಿಂದ ದಾನಿಗಳಿಂದ ಹಣ ಸಂಗ್ರಹಿಸಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಲಾಯಿತು.


ಅವಧೂತ ವಿನಯ್ ಗುರೂಜಿ ಆಂಬ್ಯುಲೆನ್ಸ್ ಚಲಾಯಿಸಿ ಆಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರಂಗಯ್ಯ ಶೆಟ್ಟಿಗಾರ್, ರವಿ ಕಕ್ಕೆಪದವು, ಪುತ್ತೂರಿನ ಎಸ್ಆರ್.ಕೆ ಲ್ಯಾಡರ್ಸ್ ಮಾಲಕರಾದ ಶ್ರೀ ಕೇಶವ.ಎ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ವಿಶೇಷಾಧಿಕಾರಿಗಳಾದ ಡಾ.ಶಿವಕುಮಾರ್ ಹೊಸೋಳಿಕೆ ಮೊದಲಾದವರು ಉಪಸ್ಥಿತರಿದ್ದರು.

Also Read  ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಹೊಡೆದಾಟ ► ಜೈಲರ್ ಸೇರಿ ಮೂವರಿಗೆ ಗಾಯ

 

error: Content is protected !!
Scroll to Top