ಅಟೋ ರಿಕ್ಷಾ ಪಲ್ಟಿ ➤ ಓರ್ವ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 10. ಅಟೋ ರಿಕ್ಷಾವೊಂದು ಪಲ್ಟಿಯಾಗಿ ಪ್ರಯಾಣಿಕೊನೋರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸೋಮಂತಡ್ಕ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಕಕ್ಕಿಂಜೆ ನಿವಾಸಿ ಢೀಕಯ್ಯ ಎಂದು ಗುರುತಿಸಲಾಗಿದೆ. ಹೇಮಂತ್ ಎಂಬವರು ಚಲಾಯಿಸುತ್ತಿದ್ದ ರಿಕ್ಷಾಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 

error: Content is protected !!

Join the Group

Join WhatsApp Group