(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಗೋವಿಂದರಾಜಪುರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಈತ ಚನ್ನಸಂದ್ರದಲ್ಲಿ ವಾಸವಾಗಿದ್ದ. ಈತ ಯಾರಿಗೂ ಅನುಮಾನ ಬಾರದಂತೆ ಅಮೂಲ್ ಡಬ್ಬಿಯಲ್ಲಿ ಮಾದಕ ಮಾತ್ರ ಹಾಗೂ ಹೈಡ್ರೋ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮಹಿತಿಯನ್ನು ಖಚಿತ ಪಡಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ. ಈತನಿಂದ 80 ಗ್ರಾಂ ಹೈಡ್ರೋ ಗಾಂಜಾ ಹಾಗೂ 260 ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.