ಸುಬ್ರಹ್ಮಣ್ಯ: ಶೌಚಾಲಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 16. ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ವತಿತಿಂದ ಕುಮಾರಧಾರ ಸ್ನಾನಘಟ್ಟದ ಬಳಿಯಲ್ಲಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಯಾತ್ರಾರ್ಥಿಗಳ ಹಾಗೂ ಸಾರದವಜನಿಕರ ಉಪಯೋಗಕ್ಕಾಗಿ ಶೌಚಾಲಯ ನಿರ್ಮಿಸಲಾಗಿದ್ದು, ಇದರ ಉದ್ಘಾಟನೆಯನ್ನು ಮಠದ ಆಡಳಿತಾಧಿಕಾರಿ ಸುದರ್ಶನ್ ಜೋಯಿಸ್ ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬೂರಾಜ್ ಮಹಾಜನ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶೇಖರ್ ಯು.ಡಿ, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರಾದ ಹರೀಶ್ ಇಂಜಾಡಿ, ಸೌಮ್ಯ, ಉದ್ಯಮಿ ರವಿ ಕಕ್ಕೆಪದವು, ದಿನೇಶ್ ಮೊಗ್ರ, ಕಿಶೋರ್ ಅರಂಪಾಡಿ ಮೊದಲಾದವರು ಉಪಸ್ಥಿತರಿದ್ದರು.

Also Read  ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ

 

 

error: Content is protected !!
Scroll to Top