ಬಂಟ್ವಾಳ: ಕಲ್ಲಿದ್ದಲು ಲಾರಿ ಪಲ್ಟಿ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 16. ಚಾಲಕನ ನಿಯಂತ್ರಣ ತಪ್ಪಿದ ಕಲ್ಲಿದ್ದಲು ಸಾಗಾಟದ ಲಾರಿಯೊಂದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ತುಂಬೆಯಲ್ಲಿ ನಡೆದಿದೆ.







ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿಕೊಂಡು ಬಳ್ಳಾರಿ ಕಡೆಗೆ ತೆರಳುತ್ತಿದ್ದ ವೇಳೆ ತುಂಬೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಮೆಲ್ಕಾರ್ ಟ್ರಾಫಿಕ್ ಎಸ್ಐ ರಾಜೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.






error: Content is protected !!
Scroll to Top