ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬೆಳ್ಳಾರೆಯ ಹೇಮಸ್ವಾತಿ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ ತಂಡಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಹೇಮಸ್ವಾತಿ ಆಯ್ಕೆಯಾಗಿದ್ದಾರೆ.

ಇವರು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ರಾಜ್ಯದ ವಿವಿಧೆಡೆ ನಡೆದ ಆರು ಪೂರ್ವಸಿದ್ದತಾ ಸುತ್ತನ್ನು ಯಶಸ್ವಿಯಾಗಿ ಪೂರೈಸಿ, ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನ ಮಡಿಕೇರಿ ಬೆಟಾಲಿಯನ್ ಪ್ರತಿನಿಧಿಯಾಗಿ ಪ್ರಧಾನಮಂತ್ರಿ ಸಹಿತ ಹಲವು ಗಣ್ಯರು ಪಾಲ್ಗೊಳ್ಳುವ ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ವಿವೇಕಾನಂದ ಪದವಿ ಕಾಲೇಜಿನ ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರು ಮಾರ್ಗದರ್ಶನ ನೀಡಿದ್ದಾರೆ. ಇವರು ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಉದಯಶಂಕರ್ ಕುರಿಯಾಜೆ ಮತ್ತು ವಸಂತಲಕ್ಷ್ಮೀ ದಂಪತಿಯ ಪುತ್ರಿ.

Also Read  ಕಳ್ಳತನಗೈಯ್ಯಲು ಡಯೆಟ್ ಮಾಡಿ ತೂಕ ಇಳಿಸಿದ ಖತರ್ನಾಕ್ ಕಳ್ಳ..! ➤ ಉಂಡ ಮನೆಗೆ ಕನ್ನ ಹಾಕಿದ

 

 

error: Content is protected !!
Scroll to Top