ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 20. ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸೋಮವಾರದಂದು ಬೆಳಿಗ್ಗೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ.

ಕೊಲ್ಲಾಜೆ ಕಡೆಯಿಂದ ಬರುತ್ತಿದ್ದ ಜುಪಿಟರ್ ವಾಹನವು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗಳೊಂದಿಗೆ ರಸ್ತೆ ಮಧ್ಯೆ ಬಿದ್ದುಕೊಂಡಿದ್ದರೂ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಆಟೋ ರಿಕ್ಷಾ ಚಾಲಕರು ನಿರಾಕರಿಸಿದ್ದಾರೆ ಎನ್ನಲಾಗಿದೆ. ನಂತರ ಆಪೆ ರಿಕ್ಷಾದಲ್ಲಿ ಗಾಯಾಳುಗಳನ್ನು ಕರೆದುಕೊಂಡು ಹೋಗಿದ್ದು, ನಂತರ ಸಂಪ್ಯದಲ್ಲಿ ಓರ್ವ ಗಾಯಾಳುವನ್ನು ಆಂಬ್ಯುಲೆನ್ಸ್‌ಗೆ ಶಿಫ್ಟ್ ಮಾಡಲಾಯಿತು. ನಂತರದ ಬೆಳವಣಿಗೆಯಲ್ಲಿ ಸ್ಕೂಟರ್ ಸವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂಬ ಮಾಹಿತಿಯೂ ತಿಳಿದು ಬಂದಿದೆ.

Also Read  ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ

accident

error: Content is protected !!
Scroll to Top