ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಆಟೋ ರಿಕ್ಷಾ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 21. ಆಟೋ ರಿಕ್ಷಾವೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ನಡೆದಿದೆ.


ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಅಟೋ ರಿಕ್ಷಾ ಢಿಕ್ಕಿ ಹೊಡೆದಿದ್ದು, ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

error: Content is protected !!
Scroll to Top