ಮಿಕ್ಸಿ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಮಿಕ್ಸಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ 76 ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ನಡೆದಿದೆ.

ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಶಾಲಾ ಬಸ್ಸಿನ ಚಾಲಕರಾಗಿದ್ದ ಇವರು, ಮನೆಯಲ್ಲಿ ರಾತ್ರಿ ಊಟಕ್ಕೆ ಚಟ್ನಿ ತಯಾರಿಸಲು ಮಿಕ್ಸಿ ಆನ್ ಮಾಡಿದ್ದು, ಆಗ ಮಿಕ್ಸಿಯ ವೈರ್ ನಲ್ಲಿ ತೊಂದರೆ ಇರುವುದನ್ನು ಕಂಡು ರಿಪೇರಿ ಮಾಡಲು ಮುಂದಾಗಿದ್ದಾರೆ‌. ಈ ವೇಳೆ ವಿದ್ಯುತ್ ಶಾಕ್‌ಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group