(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಸುಶೀಲಾ ಡಿಕೋಸ್ತಾ (73) ಹಾಗೂ ವಾಸಿಂ ಹುಸೇನ್ ಖಾನ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಾವೀದ್ ದಾವೂದ್ (41) ಹಾಗೂ ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ. ದಾರವಾಡದಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ-4ರ ಹಿರೇಬಾಗೇವಾಡಿ ಗ್ರಾಮದ ವೀರಪನ ಕೊಪ್ಪದ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಿರೇ ಬಾಗೇವಾಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.