ಬೆಳ್ತಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಕಾರ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರೆಲ್ಲ ಅದೃಷ್ಟವಶಾತ್ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪ ಆದಿತ್ಯವಾರ ರಾತ್ರಿ ಸಂಭವಿಸಿದೆ.

ಸುಗಮ ಹೆಸರಿನ ಖಾಸಗಿ ಬಸ್ ಕಾರ್ಕಳದಿಂದ ಹೊರಟು ನಿಡ್ಲೆ ತಲುಪುತ್ತಿದ್ದಂತೆಯೇ ಬಸ್ ನ ಮುಂಭಾಗದಲ್ಲಿರುವ ಇಂಜಿನ್ ಪಕ್ಕದಲ್ಲಿ ಬೆಂಕಿ ಕಾಣಿಸಿದ್ದು, ಇದನ್ನು ಗಮನಿಸಿದ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.

Also Read  ➤ಕನ್ನಡದ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

 

error: Content is protected !!
Scroll to Top