ಕೊರೋನಾ ತಡೆಗೆ ಸರಕಾರದಿಂದ ಮಹತ್ವದ ತೀರ್ಮಾನ ➤ ಎರಡು ವಾರಗಳ ಕಾಲ ಶಾಲಾ ಕಾಲೇಜುಗಳು ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04. ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚುತ್ತಿರುವ ನಡುವೆಯೇ ಬೆಂಗಳೂರಿನಲ್ಲಿ ಎರಡು ವಾರಗಳ ಕಾಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಸರಕಾರವು ಆದೇಶ ಹೊರಡಿಸಿದೆ.

ಈ ಬಗ್ಗೆ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿರುವ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿದ್ದು, ನೈಟ್ ಕರ್ಫ್ಯೂವನ್ನು ಮುಂದುವರಿಸಲಾಗಿದೆ‌. ಬೆಂಗಳೂರು ನಗರದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಹೊರತುಪಡಿಸಿ ಶಾಲಾ ಕಾಲೇಜುಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

Also Read  ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು...!

 

 

error: Content is protected !!
Scroll to Top