ಕಡಬ: ಬೈಕ್ – ಟಿಪ್ಪರ್ ನಡುವೆ ಅಪಘಾತ ➤ ಪವಾಡ ಸದೃಶ ಪಾರಾದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಕಡಬ, ಜ.05. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಬುಧವಾರದಂದು ನಡೆದಿದೆ‌‌.

ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ನಡುವೆ ನೆಕ್ಕರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕಿನ ಮುಂಭಾಗದ ಚಕ್ರದ ಮೇಲೆ ಟಿಪ್ಪರ್ ಹರಿದಿದ್ದು, ಬೈಕ್ ನಜ್ಜುಗುಜ್ಜಾಗಿದೆ‌. ಬೈಕ್ ಸವಾರ ಎಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Scroll to Top