ಮದ್ಯ ಪ್ರಿಯರಿಗೆ ಬಿಗ್ ಶಾಕ್ ➤ ವೀಕೆಂಡ್ ಕರ್ಫ್ಯೂ ನಲ್ಲಿ ಮದ್ಯಕ್ಕಿಲ್ಲ ಅವಕಾಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವ ಹಿನ್ನೆಲೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿನ ಅಟ್ಟಹಾಸ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶವನ್ನು ನೀಡಿಲ್ಲ. ಮದ್ಯಕ್ಕಾಗಿ ಸೋಮವಾರದವರೆಗೆ ಕಾಯಲೇಬೇಕು. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿದ್ದು, ಹೊಟೇಲ್​ಗಳಲ್ಲಿ ಪಾರ್ಸೆಲ್​ ಹಾಗೂ ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ.

Also Read  ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಯ ಬಂಧನ

error: Content is protected !!
Scroll to Top