(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06. ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಂದು ನಿಬಂಧನೆಗಳನ್ನು ಹೊರಡಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ಆದೇಶ ಹೊರಡಿಸಿದ್ದಾರೆ.
ಇಂದು ರಾತ್ರಿ 10 ಗಂಟೆಯಿಂದ ಆರಂಭಗೊಂಡು ಸೋಮವಾರಬೆಳಿಗ್ಗೆ 05 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ವೇಳೆಯಲ್ಲಿ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಜನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ದಿನಸಿ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರ, ಮೀನು, ಮಾಂಸ, ಹಾಲು, ಔಷಧಿ ಅಂಗಡಿಗಳು ಎಂದಿನಂತೆ ತೆರೆದಿರಲಿದೆ. ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಕೋವಿಡ್ ನಿಯಮಗಳ ಅನುಸಾರ ನಡೆಸಬಹುದೆಂದು ಆದೇಶದಲ್ಲಿ ತಿಳಿಸಲಾಗಿದೆ.