ಸಾಲ ನೀಡದ ಹಿನ್ನೆಲೆ- ಬ್ಯಾಂಕ್ ಗೆ ಬೆಂಕಿ ಇಟ್ಟ ಭೂಪ…!

(ನ್ಯೂಸ್ ಕಡಬ) newskadaba.com ಹಾವೇರಿ, ಜ. 10. ಸಾಲ ನೀಡಲು ನಿರಾಕರಿಸಿದರೆಂದು ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬ್ಯಾಂಕ್’ಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ನಡೆದಿದೆ.

ಕಿಡಿಗೇಡಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ನಿವಾಸಿ ವಸೀಮ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಸಾಲ ಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ, ಮ್ಯಾನೇಜರ್ ಈ ಅರ್ಜಿಯನ್ನು ನಿರಾಕರಿಸಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ ವಸೀಮ್, ಕೋಪಗೊಂಡು ಬ್ಯಾಂಕ್ ನ ಕಿಟಕಿ ಬಾಗಿಲು ತೆಗೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಸುಮಾರು 16 ಲಕ್ಷ ರೂ. ಮೌಲ್ಯದ ಆಸ್ತಿ ಹಾನಿಗೊಳಗಾಗಿದ್ದು, ಯಾವುದೇ ನಗದು ಬೆಂಕಿಗಾಹುತಿಯಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿದ್ದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ನೀಡಿದ್ದಾರೆ. ಘಟನೆಯಲ್ಲಿ ಕ್ಯಾಶ್ ಕೌಂಟರ್, ಕ್ಯಾಬಿನ್, ಸಿಸಿಟಿವಿ, ಐದು ಕಂಪ್ಯೂಟರ್‌, ಪಾಸ್‌ಬುಕ್ ಪ್ರಿಂಟರ್, ಸ್ಕ್ಯಾನರ್, ಪ್ರಿಂಟರ್, ನಗದು ಎಣಿಸುವ ಯಂತ್ರ, ಫ್ಯಾನ್, ಲೈಟ್‌ಗಳು, ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸೇರಿದಂತೆ ಒಟ್ಟು ರೂ.12 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group