ಕಡಬ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಠಾಣಾ ವ್ಯಾಪ್ತಿಯ ಕೋಡಿಂಬಾಳ ದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಗಿಳೆಯನ್ನು ಕೋಡಿಂಬಾಳ ಗ್ರಾಮದ ಬೆದ್ರಾಜೆ ನಿವಾಸಿ ಕುಮಾರ ಎಂಬವರ ಪತ್ನಿ ಲಲಿತಾ(38 ವ.) ಎಂದು ಗುರುತಿಸಲಾಗಿದೆ. ಮೃತ ಲಲಿತಾರವರು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಎಲ್ಲೂ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ದನಕರುಗಳ ಸಾಕಾಣಿಕೆ ಮಾಡಿಕೊಂಡಿದ್ದರು. ಬುಧವಾರದಂದು ಲಲಿತಾ ಅವರ ಗಂಡ ಕುಮಾರರವರು ಬೆಳಗ್ಗೆ ನೆರೆಯ ಹಮೀದ್ ಎಂಬವರ ಮನೆಗೆ ಕೂಲಿ ಕೆಲಸಕ್ಕೆ ಹೋಗಿದ್ದು, ಬಳಿಕ ಹಮೀದ್ ರವರ ಮನೆಯಿಂದ ಮಧ್ಯಾಹ್ನ ಊಟ ತೆಗೆದು ಕೊಂಡು ಮನೆಗೆ ಹೋದಾಗ ಮನೆಯಲ್ಲಿ ಪತ್ನಿ ಲಲಿತಾ ಮನೆಯ ನಿರ್ಮಾಣಕ್ಕೆ ಉಪಯೋಗಿಸಿದ ಕಬ್ಬಿಣದ ಪೈಪಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು, ಈ ಬಗ್ಗೆ ಕುಮಾರರವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group