(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 13. ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಏನೆಕಲ್ಲು ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ವಿಟ್ಲ ನಿವಾಸಿ ವಿನಯ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಬ್ರಹ್ಮಣ್ಯದಿಂದ ವಿಟ್ಲದ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಮಿನಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.