ಪಾದಯಾತ್ರೆ ಮೊಟಕುಗೊಳಿಸದಿದ್ದಲ್ಲಿ ಕಾನೂನು ಕ್ರಮ ಅನಿವಾರ್ಯ ➤ ಕಾಂಗ್ರೆಸ್ ನಾಯಕರಿಗೆ ಎಡಿಜಿಪಿ ಸೂಚನೆ

(ನ್ಯೂಸ್ ಕಡಬ) newskadaba.com ರಾಮನಗರ, ಜ. 13. ಮೇಕೆದಾಟು ಪಾದಯಾತ್ರೆಯ ವಿಚಾರದಲ್ಲಿ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಯಾತ್ರೆಗೆ ನಿರ್ಬಂಧ ಹೇರಿದ್ದು, ಆದರೆ ಪಾದಯಾತ್ರೆ ಮುಂದುವರೆಸುವ ಕುರಿತು ಕಾಂಗ್ರೆಸ್ ನಾಯಕರು ರಾಮನಗರದಲ್ಲಿ ಸೇರಿದ್ದು, ಪೊಲೀಸರು ಬಿಗು ಬಂದೋಬಸ್ತ್ ಮಾಡಿದ್ದಾರೆ.


ಎಡಿಜಿಪಿ ಪ್ರತಾಪ್ ರೆಡ್ಡಿ ಮತ್ತು ಎಸ್ ಪಿ ಎಸ್.ಗಿರೀಶ್ ಅವರು ಸ್ಥಳಕ್ಕೆ ಆಗಮಿಸಿ, “ಸರ್ಕಾರ ಪಾದಯಾತ್ರೆಗೆ ಅವಕಾಶ ನೀಡಿಲ್ಲ. ಹಾಗಾಗಿ ಪಾದಯಾತ್ರೆ ಸ್ಥಗಿತಗೊಳಿಸಿ ಇಲ್ಲವೇ ಕಾನೂನು ಕ್ರಮ ಅನಿವಾರ್ಯ ಎಂದು ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕರ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರ ಚರ್ಚೆಯ ಬಳಿಕ ಪಾದಯಾತ್ರೆಯ ಭವಿಷ್ಯ ನಿರ್ಧಾರವಾಗಲಿದೆ ಎಂದು ವರದಿಯಾಗಿದೆ.

 

Scroll to Top