ಪುತ್ತೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಕಾರು ಢಿಕ್ಕಿ..! ➤ ಯುವತಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಗಾಯಗೊಂಡ ಘಟನೆ ಪುತ್ತೂರಿನ ತೆಂಕಿಲ ಎಂಬಲ್ಲಿ ನಡೆದಿದೆ.


ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ. ಯುವತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ ಎನ್ನಲಾಗಿದೆ.

 

Also Read  ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                      

error: Content is protected !!
Scroll to Top