ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಪತ್ನಿ ವಿಧಿವಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರ ಧರ್ಮಪತ್ನಿ ಸತ್ಯಭಾಮ ಅವರು ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಜನವರಿ 3ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Scroll to Top