ಶಿರಾಡಿ ಘಾಟ್ ಮೇಲ್ದರ್ಜೆಗೇರಿಸಲು ಕೆಂದ್ರದಿಂದ ಗ್ರೀನ್ ಸಿಗ್ನಲ್..! ➤ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣ??

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಶಿರಾಡಿ ಘಾಟ್ ರಸ್ತೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೇಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ಎನ್ ಹೆಚ್‌ ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು ಎರಡು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಶಿರಾಡಿ ಘಾಟ್ ಮಳೆಗಾಲದ ಸಮಯದಲ್ಲಿ ಸಂಚಾರಕ್ಕೆ ಅಸಾಧ್ಯವಾಗಿದ್ದು, ಆದ್ದರಿಂದ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ಹಾಗೂ ಅನುಮೋದನೆಗಳನ್ನು ರಾಜ್ಯ ಸರಕಾರವು ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Also Read  ಸಕಲೇಶಪುರ: ರಸ್ತೆ ಅಪಘಾತದಲ್ಲಿ ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು

 

 

error: Content is protected !!
Scroll to Top