ಮಂಗಳೂರು: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 1.48 ಕೋಟಿ ರೂ. ಚಿನ್ನ, ನಗದು ವಶಕ್ಕೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 25. ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದ ಪ್ರಯಾಣಿಕ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದನ್ನು ಮಂಗಳೂರು ರೈಲ್ವೇ ಪೊಲೀಸರು ಪತ್ತೆ ಹಚ್ಚಿ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4 ಸೀಟ್ ನಂಬರ್ 35ರಲ್ಲಿದ್ದ ಪ್ರಯಾಣಿಕನ ಬಳಿಕ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ 14ಕೋಟಿ ರೂ. ನಗದು ಹಾಗೂ 40 ಲಕ್ಷ ರೂ. ಮೌಲ್ಯದ 800 ಗ್ರಾಂ. ಚಿನ್ನಾಭರಣ ಪತ್ತೆಯಾಗಿದೆ. ಇವುಗಳಿಗೆ ಯಾವುದೇ ದಾಖಲೆ ಇಲ್ಲದ ಇರುವುದರಿಂದ ರೈಲ್ವೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Also Read  ಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ

 

 

error: Content is protected !!
Scroll to Top