73ನೇ ಗಣರಾಜ್ಯೋತ್ಸವ ಪ್ರಯುಕ್ತ ಎಸ್ಡಿಪಿಐ ಕುಂಟಿನಿ ಬೂತ್ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 26. 73ನೇ ಗಣರಾಜ್ಯೋತ್ಸವದ ಪ್ರಯುಕ್ತ ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವತಿಯಿಂದ ಕುಂಟಿನಿ ಜಂಕ್ಷನ್ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಲಾಯಿಲಾ ಗ್ರಾಮ ಪಂಚಾಯತ್ ಸದಸ್ಯರುಗಳಾದ ಸಲೀಂ ಕುಂಟಿನಿ, ಶಮಾ ಮಹಮ್ಮದ್ ಆಲಿ, ಕುಂಟಿನಿ ಬೂತ್ ಸಮಿತಿ ಅಧ್ಯಕ್ಷರಾದ ರಫೀಕ್ ಕುಂಟಿನಿ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಹಿತೈಶಿಗಳು ಉಪಸ್ಥಿತರಿದ್ದರು. ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಸಮಿತಿ ಕೋಶಾಧಿಕಾರಿ ಫಝಲ್ ಕೋಯಾ ಕಾರ್ಯಕ್ರಮ ನಿರೂಪಿಸಿದರು. ಕುಂಟಿನಿ ಪರಿಸರದಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ಮಾಡಿದರು.

Also Read  ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ - ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

 

error: Content is protected !!