ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 27. ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ.

ಈ ಮಹಿಳೆಯು ಜ. 25ರಂದು ಪೈಚಾರು ಮನೆಯಿಂದ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಆಕೆಯ ಪತಿ ಕೋಗನ್ ತಾತಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಪೈಚಾರು ಸಂಸ್ಥೆಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡಿಕೊಂಡಿದ್ದ ಮಹಿಳೆ, ಪತಿ ಮತ್ತು ಮಕ್ಕಳು, ಸಂಸ್ಥೆಯವರು ನೀಡಿದ ರೂಮ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ಸುಳ್ಯ ಠಾಣಾ ಉಪನಿರೀಕ್ಷಕ ದಿಲೀಪ್ ರವರಿಗೆ ಮಹಿಳೆಯ ಬಳಿಯಿದ್ದ ಮೊಬೈಲ್ ಲೊಕೇಶನ್ ಕುಂದಾಪುರದಲ್ಲಿ ಇರುವ ಕುರಿತು ಖಚಿತ ಮಾಹಿತಿ ಲಭಿಸಿದ್ದು, ಕೂಡಲೇ ಕುಂದಾಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ, ತನಿಖೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಆಕೆ ತಾನು ತನ್ನ ಗಂಡನ ಬಳಿ ಹೋಗುವುದಿಲ್ಲ, ಪ್ರಿಯಕರ ಚಂದನ್ ಎಂಬಾತನೊಂದಿಗೆ ಇರುವುದಾಗಿ ಹಠ ಹಿಡಿದಿದ್ದಾಳೆ. ಈ ವೇಳೆ ಆಕೆಗೆ ಬುದ್ದಿವಾದ ಹೇಳಿದ ಪೊಲೀಸರು ಆಕೆಯ ಮನವೊಲಿಸಿ ಬುಧವಾರದಂದು ಆಕೆಯ ಪತಿಯೊಂದಿಗೆ ಕಳುಹಿಸಿಕೊಟ್ಟಿದ್ದು, ಇಂದು ಸುಳ್ಯ ಪೊಲೀಸರು ಅವರಿಬ್ಬರನ್ನು ವಿಚಾರಣೆ ನಡೆಸಲಿದ್ದಾರೆ.

Also Read  ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

 

 

error: Content is protected !!
Scroll to Top