ಖಾಸಗಿ ಬಸ್ಸಿನ ಫುಟ್ ಬೋರ್ಡ್ ಮೇಲೆ ಪ್ರಯಾಣಿಸಿದ ವಿದ್ಯಾರ್ಥಿನಿ ➤ ಬಸ್ ಚಾಲಕನಿಗೆ ದಂಡ..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ವಿದ್ಯಾರ್ಥಿನಿಯನ್ನು ಬಸ್ ಫೂಟ್ ಬೋರ್ಡ್ ಮೇಲೆ ಪ್ರಯಾಣಿಸುವಂತೆ ಮಾಡಿ ಆಕೆಯ ಜೀವದ ಜೊತೆ ಚೆಲ್ಲಾಟವಾಡಿದ ಬಸ್ ವಿರುದ್ದ ಸಂಚಾರಿ ಪೊಲೀಸರು ದಂಡ ವಿಧಿಸಿದ ಘಟನೆ ವರದಿಯಾಗಿದೆ.


ಇತ್ತೀಚೆಗೆ ಬೇಕಾಬಿಟ್ಟಿಯಾಗಿ ಜನರನ್ನು ತುಂಬಿಕೊಂಡು ಮಂಗಳೂರಿನಿಂದ ಬೋಂದೆಲ್ ಮಾರ್ಗದಲ್ಲಿ ಹೋಗುವ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯೋರ್ವಳು ಫೂಟ್ ಬೋರ್ಡ್ ಮೇಲೆ ಪ್ರಯಾಣಿಸುತ್ತಿರುವ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿ ಸಾರ್ವಜನಿಕರು ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದರು. ಕೋವಿಡ್ ನಿರ್ಬಂಧವಿದ್ದರೂ ಅದನ್ನು ನಿರ್ಲಕ್ಷಿಸಿ ಬೇಕಾಬಿಟ್ಟಿ ಪ್ರಯಾಣಿಕರನ್ನು ತೋರಿದ ಬಸ್ ಚಾಲಕನಿಗೆ ಸಂಚಾರಿ ಪೊಲೀಸರು 500 ರೂ. ದಂಡ ವಿಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Also Read  ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ..? ➤ ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಲಾಕ್

 

error: Content is protected !!
Scroll to Top