ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳಿಗೆ ಅನುಮತಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 02. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊರೋನಾ ಹಿನ್ನೆಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ಕಲ್ಪಿಸಲಾಗಿದೆ.

ಈ ಹಿಂದೆ ಕೊರೋನಾ ಮಿತಿಮೀರುತ್ತಿರುವ ಹಿನ್ನೆಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಪಡಿಸಲಾಗಿದ್ದು, ಇದೀಗ ಕೊರೋನಾ ಪ್ರಕರಣಗಳು ಇಳಿಕೆ ಕಾಣುತ್ತಿದ್ದು, ಇದರಿಂದಾಗಿ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಇದೀಗ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು ನೆಲವೇರಿಸಲು ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top