ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಫೆ. 03. ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಇಲ್ಲಿನ ಕ್ಯಾತಮಾರನಹಳ್ಳಿಯ ಶ್ರೀಕಂಠೇಶ್ವರ ಬಳಿ ನಡೆದಿದೆ.


ಕೊಲೆಯಾದ ಮಹಿಳೆಯನ್ನು ಸುನೀತಾ ಎಂದು‌ ಗುರುತಿಸಲಾಗಿದೆ. ಆರೋಪಿ ಗಿರೀಶ್ ಎಂದು ಗುರುತಿಸಲಾಗಿದೆ. ಸುನೀತಾಳ ಕೊಲೆ ತಡೆಯಲು ಮುಂದಾದ ಆಕೆಯ ತಾಯಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗಿರೀಶ್ ತಮಿಳುನಾಡಿನಲ್ಲಿ ಕೆಲಸ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆಯಷ್ಟೇ ಮೈಸೂರಿಗೆ ಬಂದಿದ್ದ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top