ಉಪ್ಪಿನಂಗಡಿ: ಬೈಕ್ ಗೆ ಗೂಡ್ಸ್ ಟೆಂಪೋ ಢಿಕ್ಕಿ ➤ ಸವಾರ ಬೆಳ್ಳಿಪ್ಪಾಡಿ ದೇವಳದ ಅರ್ಚಕನಿಗೆ ಗಾಯ.!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 03. ಬೈಕ್ ಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ 34 ನೆಕ್ಕಿಲಾಡಿಯಲ್ಲಿ ಗುರುವಾರದಂದು ನಡೆದಿದೆ.

 

 

ಗಾಯಗೊಂಡ ಬೈಕ್ ಸವಾರನನ್ನು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಅರ್ಚಕ ಶ್ರೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಪೆರ್ನೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಅಪರಿಚಿತ ಗೂಡ್ಸ್ ಟೆಂಪೋವೊಂದು ಢಿಕ್ಕಿ ಹಿಡೆದಿದೆ. ಪರಿಣಾಮ ಬೈಕ್ ಸವಾರ ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಎಸೆಯಲ್ಪಟ್ಟಿದ್ದು, ಸವಾರನ ಕಾಲು ಮುರಿತಕ್ಕೊಳಗಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

Also Read  ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

 

 

 

error: Content is protected !!
Scroll to Top